ಬೆಂಗಳೂರು, ಡಿ. 29: ಅಘಾತಕಾರಿ ಬೆಳವಣಿಗೆಯಲ್ಲಿ ರಾಜ್ಯ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು (ಡಿ. 29) ರಾತ್ರಿ ಒಂದು ಗಂಟೆ ಸುಮಾರಿಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸೋಮವಾರ ರಾತ್ರಿ ಖಾಸಗಿ ಟ್ರೈವರ್ ಕರೆದುಕೊಂಡು ಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದರು. ರಾತ್ರಿಯಾದರೂ ವಾಪಸ್ ಬಾರದ ಕಾರಣ ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು. ಖಾಸಗಿ ಡ್ರೈವರ್ನನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಧರ್ಮೇಗೌಡರು, ಗುಣಸಾಗರ ಸಕ್ಕರಾಯಪಟ್ಟಣದ ಬಳಿ 2 ಕಿ.ಮೀ ದೂರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲೆ ಮುಂಡದಿಂದ ಬೇರ್ಪಟ್ಟು 100 ಮೀಟರ್ ದೂರದ ವರೆಗೆ ಹೋಗಿರುವ ಹೃದಯ ವಿದ್ರಾವಕ ಚಿತ್ರಣ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಕಂಡು ಬಂದಿದೆ.