Tuesday, January 26, 2021
Home ದೆಹಲಿ ನಾಳೆ CBSE ಪರೀಕ್ಷಾ ವೇಳಾಪಟ್ಟಿ ಪ್ರಕಟ : ಪೋಖ್ರಿಯಾಲ್

ಇದೀಗ ಬಂದ ಸುದ್ದಿ

ನಾಳೆ CBSE ಪರೀಕ್ಷಾ ವೇಳಾಪಟ್ಟಿ ಪ್ರಕಟ : ಪೋಖ್ರಿಯಾಲ್

ನವದೆಹಲಿ : ಕೊರೊನಾ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಸಿಬಿಎಸ್ ಪರೀಕ್ಷೆಯ ವೇಳಾಪಟ್ಟಿಯನ್ನು ನಾಳೆ 31 ರಂದು ಸಂಜೆ 6 ಗಂಟೆಗೆ ಘೋಷಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಹೇಳಿದ್ದಾರೆ.

ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಬಳಿಕ ಹೊಸ ಕೊರೋನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಇಂತಹ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿತ್ತು.

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯು 10 ಹಾಗೂ 12 ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರು ಹೇಳಿದ್ದಾರೆ.

ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಸ್ಪಷ್ಟನೆ ನೀಡಿದ್ದು, ಸಿಬಿಎಸ್ ಇ ಪರೀಕ್ಷೆಯ ವೇಳಾಪಟ್ಟಿಯನ್ನು ನಾಳೆ ಡಿ. 31 ರಂದು ಸಂಜೆ 6 ಗಂಟೆಗೆ ಘೋಷಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಆತ್ಮೀಯ ವಿದ್ಯಾರ್ಥಿಗಳೇ ಮತ್ತು ಪೋಷಕರೇ, ಡಿ. 31ರಂದು ಸಂಜೆ 6 ಗಂಟೆಗೆ 2020-2021ನೇ ಸಾಲಿನ ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳ ಆರಂಭದ ದಿನಾಂಕವನ್ನು ಪ್ರಕಟಿಸಲಿದ್ದೇನೆ’ ಎಂದು ತಿಳಿಸಿದ್ದಾರೆ.

TRENDING