Tuesday, January 19, 2021
Home ಬೆಂಗಳೂರು ಕೋವಿಡ್ ನಿಯಮ ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ : ಸಿಎಂ ಬಿಎಸ್‍ವೈ

ಇದೀಗ ಬಂದ ಸುದ್ದಿ

ಕೋವಿಡ್ ನಿಯಮ ಪಾಲಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ : ಸಿಎಂ ಬಿಎಸ್‍ವೈ

ಬೆಂಗಳೂರು,ಡಿ.30- ರಾಜ್ಯದಲ್ಲಿ ಬ್ರಿಟನ್ ಮಾದರಿಯ ಸೋಂಕು ಕಾಣಿಸಿಕೊಂಡಿರುವುದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುವುದು ಸರಿಯಲ್ಲ. ಈ ಹೊತ್ತಿನಲ್ಲಿ ಸಾಂಕ್ರಾಮಿಕರೋಗದ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದಿದ್ದಾರೆ. ಸಾರ್ವಜನಿಕ ಬಂಧುಗಳೇ, ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು.

ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ, ಸುರಕ್ಷಿತವಾಗಿರಿ ಎಂದು ಟ್ವೀಟ್ ಮೂಲಕ ಬಿಎಸ್‍ವೈ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ. ಬ್ರಿಟನ್ ನಿಂದ ಬಂದ 15 ಸೋಂಕಿತರ ಪ್ರಯೋಗಾಲಯ ಮಾದರಿಯನ್ನು ನಿಮ್ಹಾನ್ಸ್‍ನಲ್ಲಿ ಪರೀಕ್ಷೆ ನಡೆಸಿ 7 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸುವಂತೆ ಕೋರಿದ್ದಾರೆ.

TRENDING