ಶಿವಮೊಗ್ಗ : ಬ್ರಿಟನ್ ನಿಂದ ಶಿವಮೊಗ್ಗಕ್ಕೆ ಬಂದಿರುವ ನಾಲ್ವರಲ್ಲಿ ರೂಪಾಂತರಿ ಕೊರೊನ ಸೋಂಕು ಪತ್ತೆಯಾಗಿದೆ.
ಕಳೆದ ವಾರ ಬ್ರಿಟನ್ ನಿಂದ 23 ಮಂದಿ ಶಿವಮೊಗ್ಗಕ್ಕೆ ಬಂದಿದ್ದರು ಈ ವೇಳೆ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು, ಬಳಿಕ ಇವರಲ್ಲಿ ರೂಪಾಂತರಿ ಕರೋನಾ ಸೋಂಕು ಇದೆಯೇ ಎಂದು ಎಲ್ಲರ ಗಂಟಲ ದ್ರವ ಮಾದರಿ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಆದರೆ ಇಂದು ಬಂದ ವರದಿಯಲ್ಲಿ ಶಿವಮೊಗ್ಗ ಮೂಲದ ಒಂದೇ ಕುಟುಂಬದ ನಾಲ್ವರಲ್ಲಿ ರೂಪಾಂತರಿ ಕರೋನಾ ಸೋಂಕು ಪತ್ತೆಯಾಗಿದೆ. ನಾಲ್ವರಿಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.