ನವದೆಹಲಿ : ಕೇಂದ್ರ ಸರಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವೆ ಬುಧವಾರ ಮಧ್ಯಾಹ್ನ ಮತ್ತೊಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಬಿಕ್ಕಟ್ಟು ಪರಿಹಾರವಾಗುವ ಆಶಾಭಾವ ಗೋಚರಿಸಿದೆ.
ಸರ್ಕಾರದ ಜೊತೆ ಮಾತುಕತೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯನ್ನು ದಿನದಮಟ್ಟಿಗೆ ಮುಂದೂಡಿರುವುದಾಗಿ ಪ್ರತಿಭಟನಾನಿರತ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಕೇಂದ್ರ ಸರಕಾರದ ಮಾತುಕತೆ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿರುವ ರೈತ ಸಂಘಟನೆಗಳು, ಮೂರೂ ಕೃಷಿ ಕಾಯಿದೆಗಳನ್ನು ರದ್ದುಪಡಿಸುವ ವಿಧಾನಗಳ ಕುರಿತು ಚರ್ಚಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಗೆ ಕಾನೂನು ಸ್ವರೂಪ ನೀಡುವ ಕುರಿತಂತೆಯೂ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿವೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಅವರು ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸುದೀರ್ಘ ಸಮಲೋಚನೆ ನಡೆಸಿದರು. ರೈತ ಸಂಘಟನೆಗಳ ಜತೆ ಬುಧವಾರ ಮಧ್ಯಾಹ್ನ 2 ಗಂಟೆಗೆ ನಡೆಯುವ ಮಾತುಕತೆಯ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.