ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಗ್ರಾಮಪಂಚಾಯಿತಿ ಚುನಾವಣೆಗಳಲ್ಲಿ ಶೇ. 85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ನನಗೆ ದೊರಕಿರುವ ಮಾಹಿತಿ ಪ್ರಕಾರ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಶೇ.85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ 5,728 ಗ್ರಾಮಪಂಚಾಯಿತಿಗಳಿಗೆ ಮತ ಎಣಿಕೆ ಶುರುವಾಗಿದ್ದು, ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆ ಹೊರತುಪಡಿಸಿ ಮತದಾನದಲ್ಲಿ ಮತಪತ್ರಗಳನ್ನು ಬಳಸಲಾಗಿದ್ದರಿಂದ ಫಲಿತಾಂಶಗಳ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.