Tuesday, January 26, 2021
Home ಜಿಲ್ಲೆ ಮೈಸೂರು ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವು

ಇದೀಗ ಬಂದ ಸುದ್ದಿ

ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವು

ಮೈಸೂರು : ಕರ್ತವ್ಯನಿರತ ಚುನಾವಣಾ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲೆ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.

ಬೋರೆಗೌಡ(52) ಮೃತ ಚುನಾವಣಾ ಅಧಿಕಾರಿಯಾಗಿದ್ದು. ಅವರು ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು.

ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೆಗೌಡ. ಪಿರಿಯಾಪಟ್ಟಣ ತಾಲ್ಲೂಕಿನ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮೊದಲು ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

TRENDING