Wednesday, January 27, 2021
Home ಕೋವಿಡ್-19 ದೇಶದಲ್ಲಿ ಒಂದೇ ದಿನ 21,821 ಮಂದಿಗೆ ಕೊರೊನಾ ಸೋಂಕು, 299 ಜನ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನ 21,821 ಮಂದಿಗೆ ಕೊರೊನಾ ಸೋಂಕು, 299 ಜನ ಬಲಿ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 21,821 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕೇಂದ್ರ ಕುಟುಂಬ ಮತ್ತು ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ 299 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 1,48,783 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 98,60,280 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,57,656 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

TRENDING