Tuesday, January 26, 2021
Home ರಾಜ್ಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಮಾಡಿ ಆ ದೇಶ ಹೊರಡಿಸಿದೆ.

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ,ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಡಿಸೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ಇದೀಗ (Post-matric and Merit-cum-means Scholarship) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 20/01/2021 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ ಜನವರಿ 20 ರೊಳಗಾಗಿ www.scholarships.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಕಾಲೇಜು ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಶಾಲಾ/ಕಾಲೇಜು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

TRENDING