Tuesday, January 26, 2021
Home ಸುದ್ದಿ ಜಾಲ 'ನೀಟ್'ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

‘ನೀಟ್’ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ದೇಶವ್ಯಾಪಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೀಟ್) ಬರೆಯುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವತಿಯಿಂದ ನೀಟ್ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ್ದು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ತರಬೇತಿ ನೀಡಲಾಗುವುದು. ತರಬೇತಿ ಕೊರತೆಯಿಂದ ವಿದ್ಯಾರ್ಥಿಗಳು ವೈದ್ಯಕೀಯ ಸೀಟು ಪಡೆಯುವುದರಿಂದ ವಂಚಿತರಾಗಬಾರದು. ಹಾಗಾಗಿ ಈ ವರ್ಷದಿಂದಲೇ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

TRENDING