Tuesday, January 19, 2021
Home ಅಂತರ್ ರಾಜ್ಯ ಕೋವಿಡ್ -19 ಹಿನ್ನೆಲೆ: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ

ಇದೀಗ ಬಂದ ಸುದ್ದಿ

ಕೋವಿಡ್ -19 ಹಿನ್ನೆಲೆ: ಒಡಿಶಾದಲ್ಲಿ ಹೊಸ ವರ್ಷದ ರಾತ್ರಿ ಕರ್ಫ್ಯೂ ಜಾರಿ

ಭುವನೇಶ್ವರಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡ ಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಶೇಷ ಪರಿಹಾರ ಆಯುಕ್ತ(ಎಸ್‌ಆರ್‌ಸಿ) ಪಿ ಕೆ ಜೆನಾ ಅವರು ಹೇಳಿದ್ದಾರೆ.

ಆದಾಗ್ಯೂ, ಕರ್ಫ್ಯೂ ಸಮಯದಲ್ಲಿ ಎಲ್ಲಾ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಒಡಿಶಾ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸುತ್ತಿದೆ. ಸಾರ್ವಜನಿಕರು ಸಹಕರಿಸಬೇಕು. ಈ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ ಎಂದು ಜೆನಾ ಅವರು ಟ್ವೀಟ್ ಮಾಡಿದ್ದಾರೆ.

TRENDING