Wednesday, January 27, 2021
Home ದೇಶ ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ : ಸಾವಿನ ಸಂಖ್ಯೆ 26ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಯೆಮೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ : ಸಾವಿನ ಸಂಖ್ಯೆ 26ಕ್ಕೆ ಏರಿಕೆ

ಅಡೆನ್: ಯೆಮೆನ್ ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟ ಘಟನೆಯಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯೆಮೆನ್ ನ ಅಡೆನ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನೂತನವಾಗಿ ರಚನೆಯಾದ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನ ಲ್ಯಾಂಡ್ ಆದ ತಕ್ಷಣ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಕನಿಷ್ಟ 26 ಮಂದಿ ಸಾವನ್ನಪ್ಪಿದ್ದಾರೆ.

ಸೌದಿ ಅರೇಬಿಯಾದಲ್ಲಿ ಯೆಮನ್‌ನ ರಾಷ್ಟ್ರಪತಿ ಅಬೆದ್ರಬ್ಬೊ ಮನ್ಸೂರ್‌ ಹಾದಿ ಅವರಿಂದ ಕೆಲ ದಿನಗಳ ಹಿಂದೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದ ಸಚಿವರು, ಏಡನ್‌ಗೆ ಆಗಮಿಸಿದ್ದರು. ಇರಾನ್‌ ಬೆಂಬಲಿತ ಹುತಿ ಬಂಡುಕೋರರು ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದು, ಸಚಿವರೆಲ್ಲರೂ ಸುರಕ್ಷಿತವಾಗಿದ್ದಾರೆ, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಸರ್ಕಾರಿ ಮೂಲಗಳು ತಿಳಿಸಿವೆ. ಅಂತೆಯೇ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎನ್ನಲಾಗಿದೆ.

TRENDING