Sunday, January 24, 2021
Home ಕೋವಿಡ್-19 ಭಾರತದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ. 98.83ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ. 98.83ಕ್ಕೆ ಏರಿಕೆ

 ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 23 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 98 ಲಕ್ಷದ 83 ಸಾವಿರಕ್ಕೆ ಏರಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ 54 ಸಾವಿರಕ್ಕೆ ಇಳಿಕೆ ಕಂಡಿದೆ.

ಕಳೆದ 179 ದಿನಗಳಿಂದಲೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಶೇಕಡಾವಾರು 2.47ರಷ್ಟಿದ್ದು, ಕಳೆದ 7 ದಿನಗಳಿಂದ ದೇಶದಲ್ಲಿ 300ಕ್ಕಿಂತಲೂ ಕಡಿಮೆ ಸಾವು ವರದಿಯಾಗುತ್ತಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಐಸಿಎಂಆರ್‍ ನೀಡಿರುವ ವರದಿಯಂತೆ ಕಳೆದ 24 ತಾಸಿನಲ್ಲಿ 10 ಲಕ್ಷ 62 ಸಾವಿರಕ್ಕೂ ಹೆಚ್ಚು ಕೋವಿಡ್ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 17,31,11,694 ಕೋಟಿಗೆ ಏರಿಕೆಯಾಗಿದೆ.

TRENDING