ಬೆಂಗಳೂರು, ಜ. 01: ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುರುವಾರ ಬೆಂಗಳೂರು ನಗರದ ಕೆಲವೆಡೆ ಹಾಗೂ ಮಂಡ್ಯದಲ್ಲಿ ಮಳೆಯಾಗಿತ್ತು.ದಾವಣಗೆರೆಯಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಐದಾರು ಜಿಲ್ಲೆಗಳಲ್ಲಿ ಮುಂದಿನ ಒಂದು ದಿನಗಳ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ.
ಇನ್ನು ಇಡೀ ದೇಶದ ಬಗ್ಗೆ ಗಮನಿಸುವುದಾದರೆ ಪಂಜಾಬ್, ಹರ್ಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಹಿಮಾಚಲಪ್ರದೇಶದಲ್ಲಿ ಮುಂದಿನ ಎರಡು ದಿನ ಶೀತಗಾಳಿ ಬೀಸಲಿದೆ.