ಬೆಂಗಳೂರು, ಜ.1- ಮೊದಲ ದಿನ ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು ಆತಂಕ ಪಡುವುದು ಬೇಡ. ಧೈರ್ಯವಾಗಿ ಶಾಲೆಗೆ ಕಳುಹಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ಹೇಳಿದರು.
ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬಗೋಡಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಆರೋಗ್ಯ ಮಾರ್ಗಸೂಚಿಗಳ ಪಾಲನೆಗೆ ಕ್ರಮ ವಹಿಸಲಾಗಿದೆ.
ಮಾನಿಟರ್ ಮಾಡಲು ಜಿಲ್ಲಾ ಮಟ್ಟದಲ್ಲಿ ವಿಚಕ್ಷಣ ದಳ ನೇಮಕ ಮಾಡುತ್ತೇವೆ. ಧೈರ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಯಾರಿಗೂ ಒತ್ತಡ ಇಲ್ಲ. ಇಚ್ಛೆ ಇದ್ದವರು ಬರಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವರು ಏನೇನು ಎಚ್ಚರಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಲಹೆ ಮಾಡಿದರು. ಜ್ವರ, ನೆಗಡಿ, ಕೆಮ್ಮು ಬಂದರೆ ಶಾಲೆಗೆ ಬರಬೇಡಿ ಎಂದು ಸಲಹೆ ನೀಡಿದ ಅವರು, ಈ ಒಂಭತ್ತು ತಿಂಗಳು ಮನೆಯಲ್ಲಿ ಮಾಡಿದ್ದೇನು ಎಂದು ವಿದ್ಯಾರ್ಥಿಗಳ ಜತೆ ಮಾತನಾಡಿ ಸಚಿವರು ಅಭಿಪ್ರಾಯ ಸಂಗ್ರಹ ಮಾಡಿದರು.