Sunday, January 24, 2021
Home ರಾಜ್ಯ ಮೊದಲ ದಿ‌ನ ಶಾಲೆಯಲ್ಲಿ ಶೇ.40ರಷ್ಟು ವಿದ್ಯಾರ್ಥಿಗಳು ಹಾಜರಾತಿ : ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಮೊದಲ ದಿ‌ನ ಶಾಲೆಯಲ್ಲಿ ಶೇ.40ರಷ್ಟು ವಿದ್ಯಾರ್ಥಿಗಳು ಹಾಜರಾತಿ : ಸುರೇಶ್ ಕುಮಾರ್

 ಬೆಂಗಳೂರು: ರಾಜ್ಯದಲ್ಲಿ ಮೊದಲ ದಿನ ದ್ವಿತೀಯ ಪಿಯುಸಿಗೆ ಶೇ. 32.56 ಹಾಗೂ ಎಸ್ಸೆಸ್ಸೆಲ್ಸಿ ತರಗತಿಗೆ ಶೇ.41ರಷ್ಟು ವಿದ್ಯಾರ್ಥಿಗಳು ಹಾಜರಾತಿ ದಾಖಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಶಾಲಾರಂಭಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಕ್ಕಳು ತುಂಬ ಲವಲವಿಕೆಯಿಂದ ಶಾಲೆಗೆ ಬಂದಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಬಂದಿದ್ದಾರೆ. ರಾಜ್ಯದ 16850 ಪ್ರೌಢಶಾಲೆಯಲ್ಲಿ ನೋಂದಣಿ ಮಾಡಿಕೊಂಡ 9,27,472 ವಿದ್ಯಾರ್ಥಿಗಳಲ್ಲಿ 3,80,264(ಶೇ.40) ರಷ್ಟು ಹಾಜರಾತಿ ದಾಖಲಾಗಿದೆ. 5492 ಪಿಯು ಕಾಲೇಜಿನಲ್ಲಿ ನೋಂದಣಿ ಮಾಡಿಕೊಂಡಿರುವ 2,41,965 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ 78,794(ಶೇ.32.56) ಹಾಜರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ವ್ಯವಸ್ಥೆ ಮಾಡಿದ್ದಾರೆ. ಹೆಣ್ಣುಮಕ್ಕಳ ಹಾಜರಾತಿ ಹೆಚ್ಚಿದೆ. ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.‌ ಸಿಹಿ ಹಂಚಿದ್ದಾರೆ. ಹೀಗೆ ಮೊದಲ ದಿನದ ತರಗತಿ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳಾದ ಉಮಾಶಂಕರ್, ಅನ್ಬುಕುಮಾರ್, ಆರ್.ಸ್ನೇಹಲ್ ಇದ್ದರು.

TRENDING