Saturday, January 23, 2021
Home ರಾಜ್ಯ ಪೇಜಾವರ ಶ್ರೀಗಳಿಗೆ 'ವೈ' ಶ್ರೇಣಿ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ

ಇದೀಗ ಬಂದ ಸುದ್ದಿ

ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ

ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ಗುರುವಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.

ಗುರುವಾರದಿಂದಲೇ ಜಾರಿಗೆ ಬರುವಂತೆ ವೈ ಶ್ರೇಣಿ ಭದ್ರತೆಯನ್ನು ಒದಗಿಸಲಾಗಿದ್ದು, ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತರಾದ ಶ್ರೀಗಳು, ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಶ್ರೀಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಸ್ಪಂದನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಶ್ರೀಗಳಿಗೆ ವೈ ಶ್ರೇಣಿ ಭದ್ರತೆಯನ್ನು ಒದಗಿಸಿದೆ.

ಶ್ರೀಗಳಿಗೆ ಭದ್ರತೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಕೆ.ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠವು ಕೃತಜ್ಞತೆ ಸಲ್ಲಿಸಿದೆ.

TRENDING