Wednesday, January 27, 2021
Home ದೆಹಲಿ ಉಚಿತ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರದಿಂದ ಬಿಗ್ ಶಾಕ್

ಇದೀಗ ಬಂದ ಸುದ್ದಿ

ಉಚಿತ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರದಿಂದ ಬಿಗ್ ಶಾಕ್

ನವದೆಹಲಿ: ದೇಶದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವುದಿಲ್ಲ. ಆದ್ಯತಾ ವರ್ಗದಲ್ಲಿರುವ 30 ಕೋಟಿ ಜನರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಲಿದೆ.

ನೀತಿ ಆಯೋಗದ ಸದಸ್ಯ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ವಿನೋದ್ ಪಾಲ್ ಈ ಬಗ್ಗೆ ಮಾತನಾಡಿ, ಆದ್ಯತಾ ವರ್ಗದ 30 ಕೋಟಿ ಭಾರತೀಯರಿಗೆ ಸರ್ಕಾರ ಉಚಿತವಾಗಿ ಲಸಿಕೆ ನೀಡಲಿದೆ. ದೇಶದ ಎಲ್ಲ ಜನರಿಗೂ ಅಲ್ಲ ಎಂದು ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸೇರಿದಂತೆ ಮುಂಚೂಣಿ ನೌಕರರು, ವೃದ್ಧರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಒಟ್ಟು 30 ಕೋಟಿ ಜನರಿಗೆ ಮಾತ್ರ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಕೆಲವು ರಾಜ್ಯಗಳಲ್ಲಿ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಣೆ ಮಾಡಲಾಗಿದೆ.

TRENDING