Tuesday, January 26, 2021
Home ಸುದ್ದಿ ಜಾಲ ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ : ಏಳು ಮಂದಿಗೆ ಗಾಯ

ಇದೀಗ ಬಂದ ಸುದ್ದಿ

ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ : ಏಳು ಮಂದಿಗೆ ಗಾಯ

ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ಏಳು ಮಂದಿ ನಾಗರಿಕರು ಗಾಯಗೊಂಡಿರುವ ಘಟನೆ ಶನಿವಾರ(ಜನವರಿ 02) ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಎಲ್ಲರು ಅಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ. ಗ್ರನೇಡ್ ದಾಳಿ ನಡೆದ ಕೂಡಲೇ ಭದ್ರತಾ ಪಡೆ ಕೂಡಲೇ ಇಡೀ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಲು ಯತ್ನಿಸುತ್ತಿದ್ದು, ಭದ್ರತಾ ಪಡೆ ಅದನ್ನು ವಿಫಲಗೊಳಿಸುತ್ತಿವೆ. ಅಲ್ಲದೇ ಸತತ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಕೆಲವು ಉಗ್ರರು ಬಲಿಯಾಗಿರುವುದಾಗಿ ವರದಿ ತಿಳಿಸಿದೆ.

TRENDING