ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank India) ಖಾಲಿ ಇರುವ 452 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವಿಶೇಷ ಅಧಿಕಾರಿ ಹುದ್ದೆಗಳಿಗೆ ಎಂಬಿಎ, ಪಿಜಿಡಿಬಿಎಂ, ಎಂಸಿಎ, ಎಂ.ಸ್ಸಿ, ಪದವಿ, ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:– ಅಕ್ಟೋಬರ್ 31, 2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿ: -ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 70 ರೂಪಾಯಿ ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?:
ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ https://sbi.co.in/web/careers ತೆರಳಿ, ನಂತರ ಅಲ್ಲಿ ನೀಡಿರುವ ಮಾಹಿತಿಯನ್ನು , ಮಾಹಿತಿಯನ್ನು ಭರ್ತಿ ಮಾಡಬೇಕು. ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಿ ಜನವರಿ 11,2021ರೊಳಗೆ ಅರ್ಜಿ ಸಲ್ಲಿಸಬೇಕು.
SBI Recruitment 2021: 452 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
