Wednesday, January 27, 2021
Home ಜಿಲ್ಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 2.50 ಕೆ.ಜಿ. ಚಿನ್ನ ವಶ

ಇದೀಗ ಬಂದ ಸುದ್ದಿ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 2.50 ಕೆ.ಜಿ. ಚಿನ್ನ ವಶ

ಬೆಂಗಳೂರು, ಜ.2- ಮಂಗಳೂರು ಮತ್ತು ಬೆಂಗಳೂರು ಅಂತಾತ್ಟರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಎರಡು ಕಡೆಯಿಂದ ಕಳ್ಳಸಾಗಾಣಿಕೆಯಾಗುತ್ತಿದ್ದ ಒಟ್ಟು 2.50 ಕೆ.ಜಿ. ಚಿನ್ನ ಪತ್ತೆಯಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು 1024 ಗ್ರಾಮ್ ತೂಕದ ಒಟ್ಟು 52,89,984 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ತಪಾಸಣೆಯಲ್ಲಿ ಒಟ್ಟು 1.26 ಕೆ.ಜಿ. ತೂಕದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ಒಮ್ಮೆ 504 ಗ್ರಾಂ ಹಾಗೂ ಮತ್ತೊಮ್ಮೆ 756 ಗ್ರಾಂ ಚಿನ್ನ ವಶ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 64.13 ಲಕ್ಷ ರೂ.ಗಳೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಗಳಲ್ಲಿ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING