Friday, January 22, 2021
Home ರಾಜ್ಯ ಶಾಲೆ ಆರಂಭದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್

ಇದೀಗ ಬಂದ ಸುದ್ದಿ

ಶಾಲೆ ಆರಂಭದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಶಾಲೆ ಆರಂಭದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಶುರುವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ ಸಂಘಟನೆ ಪ್ರತಿಭಟನೆ ಕೈಗೊಂಡಿದೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ)ದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜನವರಿ 6 ರಂದು ಸರ್ಕಾರದ ವಿರುದ್ಧ ರುಪ್ಸಾ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿದ್ದು, 8 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ. ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿದೆ.

ಸಂಕಷ್ಟದಲ್ಲಿರುವ ಶಾಲೆಗಳ ಶಿಕ್ಷಕರಿಗೆ ಪರಿಹಾರ ಘೋಷಿಸಬೇಕು. ಕನಿಷ್ಠ ಒಂದು ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಬೇಕು. ಸರ್ಕಾರ ಶಿಕ್ಷಕರಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ನೀಡಬೇಕು. 1985 ರಿಂದ ಇರುವ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ನವೆಂಬರ್ 10 ರಂದು ಹೊರಡಿಸಿದ ಸುತ್ತೋಲೆ ಮರುಪರಿಶೀಲಿಸಬೇಕು. ಶಾಲೆಗಳ ಮಾನ್ಯತೆ ನವೀಕರಣ ಆದಾಲತ್ ರೂಪದಲ್ಲಿ ಆಗಲಿ. ಗಡಿಭಾಗದ ಶಾಲೆಗಳನ್ನು ಮುಚ್ಚುವ ನಿರ್ಧಾರ ಹಿಂಪಡೆಯಬೇಕು. 2020 -21 ನೇ ಸಾಲಿನ ಆರ್ಟಿಇ ಹಣ ನೀಡಬೇಕು ಎಂದು ಹೇಳಲಾಗಿದೆ.

TRENDING