Saturday, January 16, 2021
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,177 ಮಂದಿಗೆ ಹೊಸ ಕೊರೋನಾ ಸೋಂಕು...

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,177 ಮಂದಿಗೆ ಹೊಸ ಕೊರೋನಾ ಸೋಂಕು ಪತ್ತೆ

ನವದೆಹಲಿ : ಇಂದು ಮತ್ತೆ ಭಾರತದಾದ್ಯಂತ 24 ಗಂಟೆಯಲ್ಲಿ 18,177 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,03,23,965ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಸೋಂಕಿತರಾದಂತ 217 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 18,177 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 1,03,23,965ಕ್ಕೆ ಏರಿಕೆಯಾಗಿದೆ. ಇವರಲ್ಲಿ ಕಳೆದ 24 ಗಂಟೆಯಲ್ಲಿ 20,923 ಜನ ಸೋಂಕಿತರು ಸೇರಿದಂತೆ ಇದುವರೆಗೆ 99,27,310 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ದೇಶದಲ್ಲಿ 2,47,220 ಸಕ್ರೀಯ ಕೊರೋನಾ ಸೋಂಕಿತರಿರುವುದಾಗಿ ತಿಳಿಸಿದೆ.

ಇನ್ನೂ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 217 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 1,49,435ಕ್ಕೆ ಏರಿಕೆಯಾಗಿರುವುದಾಗಿಯೂ ತಿಳಿಸಿದೆ.

TRENDING