Tuesday, January 26, 2021
Home ಕೋವಿಡ್-19 ರಾಜ್ಯದಲ್ಲಿ ಶಾಲೆ ಆರಂಭದ ಬೆನ್ನಲ್ಲೇ ಬಿಗ್ ಶಾಕ್: 18 ಶಿಕ್ಷಕರಿಗೆ ಕೊರೊನಾ ಸೋಂಕು!

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಶಾಲೆ ಆರಂಭದ ಬೆನ್ನಲ್ಲೇ ಬಿಗ್ ಶಾಕ್: 18 ಶಿಕ್ಷಕರಿಗೆ ಕೊರೊನಾ ಸೋಂಕು!

ಬೆಂಗಳೂರು : ಶಾಲಾ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಿಗ್ ಶಾಕ್ ಎದುರಾಗಿದ್ದು, ಶಿಕ್ಷಕರಿಗೆ ಇದೀಗ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಹೌದು, ಶಾಲೆ ಆರಂಭದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ 18 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಉತ್ತರ ಕನ್ನಡ ಜಿಲ್ಲೆಯ ಮೂವರು ಹಾಗೂ ಹಾಸನ ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ, ತುಮಕೂರು ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರಿಗೆ, ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಸದ್ಯ ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಇದೀಗ ಆತಂಕ ಶುರುವಾಗಿದೆ.

TRENDING