Thursday, January 21, 2021
Home ರಾಜಕೀಯ 2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದೆ ಹೋದಲ್ಲಿ ರಾಜಕೀಯ ನಿವೃತ್ತಿ: ಹೆಚ್.ಡಿ. ರೇವಣ್ಣ

ಇದೀಗ ಬಂದ ಸುದ್ದಿ

2023 ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದೆ ಹೋದಲ್ಲಿ ರಾಜಕೀಯ ನಿವೃತ್ತಿ: ಹೆಚ್.ಡಿ. ರೇವಣ್ಣ

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಜೆಡಿಎಸ್, ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಇಂತಹ ಬೆಳವಣಿಗೆ ನಡೆದರೆ ತಾವು ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಹೇಳಿದ್ದರು.

ಇದೀಗ ಮತ್ತೊಮ್ಮೆ ರಾಜಕೀಯ ನಿವೃತ್ತಿ ಮಾತುಗಳನ್ನಾಡಿರುವ ರೇವಣ್ಣ, 2023ಕ್ಕೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಾರದೆ ಹೋದಲ್ಲಿ ತಾವು ರಾಜಕೀಯದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿರುವ ಅವರು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

TRENDING