ನವದೆಹಲಿ: ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಪ್ರಯಾಣಿಕರು ತಮ್ಮ ವಿಮಾನ ಹಾರಾಟದ ಸ್ಥಿತಿಗತಿಯನ್ನು ತಪಾಸಣೆ ಮಾಡಿಕೊಳ್ಳುವಂತೆ ಸ್ಪೈಸ್ ಜೆಟ್ ತಿಳಿಸಿದೆ.
ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆ ನಿನ್ನೆಯಿಂದ ದೆಹಲಿ ಮತ್ತು ಹರ್ಯಾಣ ಭಾಗಗಳಲ್ಲಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದ್ದು, ನಿನ್ನೆ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ನಷ್ಟಾಗಿತ್ತು.