ಹಾಸನ : ಬೇಲೂರು ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಸ್ಥಾನಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೇಲೂರು ತಾಲ್ಲೂಕಿನ ಲಕ್ಷ್ಮಿಪುರ ಅಂಗನವಾಡಿ ಕೇಂದ್ರದಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ, ಘಟ್ಟದಹಳ್ಳಿ, ಶಿವನೇಹಳ್ಳಿ, ಹೊಸಮನೆ ಹಾಗೂ ಮಲ್ಲಿಕಾರ್ಜುನಪುರದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುತ್ತದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜ.30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಾಲೂರು ಕಾಂಪ್ಲೆಕ್ಸ್, ಡಾ ಬಿ.ಆರ್.ಅಂಬೇಡ್ಕರ್ ವೃತ್ತ. ಬೇಲೂರು ದೂರವಾಣಿ ಸಂಖ್ಯೆ 08177- 222269 ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.