Friday, January 22, 2021
Home ಸುದ್ದಿ ಜಾಲ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲೋ ಬಿಪಿ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಶುಗರ್ ಲೋ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TRENDING