Tuesday, January 26, 2021
Home ಬೆಂಗಳೂರು ಇಂದು ಶಾಸಕರ ಜೊತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಇದೀಗ ಬಂದ ಸುದ್ದಿ

ಇಂದು ಶಾಸಕರ ಜೊತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರ ಜೊತೆ ಮಹತ್ವದ ಸಭೆ ನಡೆಸಲಿದ್ದು, ಶಾಸಕರ ಕ್ಷೇತ್ರಗಳಿಗೆ ಕಾರ್ಯಕ್ರಮ ರೂಪಿಸುವುದು, ಶಾಸಕರಿಗೆ ಅನುದಾನ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಮತ್ತು ನಾಳೆ ಸಿಎಂ ಸಭೆ ನಡೆಸಲಿದ್ದು, ಶಾಸಕರ ಕ್ಷೇತ್ರದ ಅಭಿವೃದ್ಧ ಕಾರ್ಯಗಳು, ಇಲಾಖೆಗಳಿಂದ ಆಗಬೇಕಿರುವ ಕೆಲಸ ಕಾರ್ಯಗಳು ಸೇರಿದಂತೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು ಹಾಗೂ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ಶಾಸಕರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

TRENDING