ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16,505 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,03,40,470 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ನಿನ್ನೆ ಒಂದೇ ದಿನ 214 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 1,49,649 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಈವರೆಗೆ ದೇಶದಲ್ಲಿ 99,46,867 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,43,953 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.