Tuesday, January 19, 2021
Home ಜಿಲ್ಲೆ ಬೆಳಗಾವಿ ಮುಂದಿನ ಐದಾರು ತಿಂಗಳಲ್ಲಿ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ಸಚಿವ ರಮೇಶ್ ಜಾರಕಿಹೊಳಿ

ಇದೀಗ ಬಂದ ಸುದ್ದಿ

ಮುಂದಿನ ಐದಾರು ತಿಂಗಳಲ್ಲಿ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ಸಚಿವ ರಮೇಶ್ ಜಾರಕಿಹೊಳಿ

 ಬೆಳಗಾವಿ: ಮುಂದಿನ ಐದಾರು ತಿಂಗಳಲ್ಲಿ ಗೋಕಾಕ ಪ್ರತ್ಯೇಕ ಜಿಲ್ಲೆಯನ್ನಾಗಿ  ಪ್ರತ್ಯೇಕ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಗೋಕಾಕದಲ್ಲಿ ಸೋಮವಾರ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅವರು,

 ಈ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಗೋಕಾಕ್- ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು. ಆದರೆ ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಹೇಳಿದ್ದರಿಂದ ಈ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿದ ನಂತರ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡಲು ಹೇಳಿದ್ದೇನೆ. ಇದೇ ತಾಂತ್ರಿಕ ಕಾರಣದಿಂದ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಉಳಿದಿದೆ ಎಂದರು.

ಕೋವಿಡ್ ಹಾಗೂ ಆರ್ಥಿಕ ಕಾರಣದಿಂದ ತಾಲೂಕು ರಚನೆ ಬಾಕಿ ಉಳಿದಿದೆ. ನನಗೆ ಸುಳ್ಳು ಹೇಳಲು ಬರುವುದಿಲ್ಲ. ಬಳ್ಳಾರಿ ಜಿಲ್ಲೆ ವಿಭಜನೆ ಏಕೆ ಆಯ್ತು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಜೆಟ್ ಮುಗಿದ ನಂತರ ನಿಯೋಗ ಮೂಲಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡೋಣ ಎಂದು ಹೇಳಿದರು

TRENDING