Sunday, January 24, 2021
Home ಅಂತರ್ ರಾಷ್ಟ್ರೀಯ ಪಾಕ್ ನಲ್ಲಿ ಹಿಂದೂ ದೇವಾಲಯ ಧ್ವಂಸ : 8 ಪೊಲೀಸ್ ಅಧಿಕಾರಿಗಳ ಅಮಾನತು

ಇದೀಗ ಬಂದ ಸುದ್ದಿ

ಪಾಕ್ ನಲ್ಲಿ ಹಿಂದೂ ದೇವಾಲಯ ಧ್ವಂಸ : 8 ಪೊಲೀಸ್ ಅಧಿಕಾರಿಗಳ ಅಮಾನತು

ಪೆಶಾವರಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ತೆರಿ ಗ್ರಾಮದಲ್ಲಿನ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಪೊಲೀಸ್ ಅಧಿಕಾರಿಗಳನ್ನು ಭಾನುವಾರ ಅಮಾನತು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 100 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದೂ ದೇವಾಲಯದ ನವೀಕರಣವನ್ನು ಜಮಿಯತ್ ಉಲೆಮಾ ಇ-ಇಸ್ಲಾಂ ಪಕ್ಷದ ಬೆಂಬಲಿಗರು ವಿರೋಧಿಸಿ, ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 350ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಎಲ್ಲರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಹೀರ್ ಷಾ ತಿಳಿಸಿದ್ದಾರೆ.

TRENDING