Monday, January 18, 2021
Home ದೆಹಲಿ ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ

ಇದೀಗ ಬಂದ ಸುದ್ದಿ

ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ

ಹೈದರಾಬಾದ್‌: ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ರೈಲಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್‌ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕೊ ಪೈಲೆಟ್‌ ರೈಲು ಎಂಜಿನಲ್ಲಿ ಬೆಂಕಿ ಉರಿಯುವುದನ್ನು ಗಮನಿಸಿದ ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ಬೋಗಿಗಳಿಂದ ಎಂಜಿನ್‌ನನನ್ನು ಬೇರ್ಪಡಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

TRENDING