Tuesday, January 26, 2021
Home ದೆಹಲಿ ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

ಇದೀಗ ಬಂದ ಸುದ್ದಿ

ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

 ನವದೆಹಲಿ, ಜ.05: ಜನವರಿ 29ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.1ರಂದು ಕೇಂದ್ರ ಬಜೆಟ್ ಮಂಡನೆ ಆಗಲಿರುವುದಾಗಿ ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವುದಾಗಿ ತಿಳಿದುಬಂದಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 29ರಿಂದ ಫೆಬ್ರುವರಿ 15ರವರೆಗೂ ನಡೆಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.

ಜೊತೆಗೆ ಸಂಸತ್ ಕಲಾಪ ಪ್ರತಿ ದಿನ 4 ಗಂಟೆಗಳ ಅವಧಿ ನಡೆಯಲಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತಲಾ 4 ಗಂಟೆಗಳ ಕಾಲ ಕಲಾಪ ನಡೆಯಲಿದೆ ಎಂದು ತಿಳಿದುಬಂದಿದೆ.

2021-22ರ ಬಜೆಟ್ ಕುರಿತು ಬಜೆಟ್ ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಡಿಸೆಂಬರ್ 14ರಂದು ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದರು.

TRENDING