Monday, January 25, 2021
Home ರಾಜ್ಯ ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಇನ್ಮುಂದೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಅವರು ಸೋಮವಾರ ರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ, ರಾಜ್ಯ ಬಜೆಟ್ ಮಂಡನೆ ನಂತರ ಪಡಿತರದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ಹಂತ ಹಂತವಾಗಿ ರಾಜ್ಯಾದ್ಯಂತ ಈ ಯೋಜನೆಯನ್ನು ವಿತರಿಸಲಾಗುವುದು. ಸದ್ಯದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಮುಂದಿನ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗುವುದು ಅಂತ ಅವರು ಹೇಳಿದರು.

TRENDING