ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ.ಅನುದಾನದ ಭರವಸೆ ನೀಡಿದ್ದಾರೆ.
ಶಾಸಕರೊಂದಿಗೆ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಭರವಸೆ ನೀಡಿದ್ದು, ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ.ಗಳ ಅನುದಾನವನ್ನು ನೀಡುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಮುಂಬರುವ ಬಜೆಟ್ ನಲ್ಲಿ ಆಯಾ ಕ್ಷೇತ್ರಗಳಿಗೆ ಅನುಕೂಲವಾಗುವಂತೆ ಒಂದಿಷ್ಟು ಅನುದಾನ ನೀಡಬಹುದು.ನಂತರ ಅದನ್ನು ಮುಂದಿನ ಬಜೆಟ್ ನಲ್ಲಿ ಮುಂದುವರೆಸಬಹುದು ಎಂದು ಮೂಲಗಳು ತಿಳಿಸಿವೆ.