Sunday, January 24, 2021
Home ಸುದ್ದಿ ಜಾಲ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಇದೀಗ ಬಂದ ಸುದ್ದಿ

ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿತಿಂಗಳ ಬಳಿಕ ವಾಹನ ಸವಾರರಿಗೆ ಮತ್ತೆ ತೈಲ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಇಂದು ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ.

ಕಳೆದ 29 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣದೆ ಸ್ಥಿರತೆ ಕಾಯ್ದುಕೊಂಡಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಜನ ಜನಸಾಮಾನ್ಯರು ತತ್ತರಿಸುವಂತಾಗಿದೆ.

ಇಂದು ಪೆಟ್ರೋಲ್ ಬೆಲೆಯಲ್ಲಿ 26 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 83.97 ರೂ. ತಲುಪಿದೆ. ಡೀಸೆಲ್ ಬೆಲೆ 74.12 ರೂ. ಗೆ ಮಾರಾಟವಾಗುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 86.76 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ 78.56 ರೂ. ಗೆ ಏರಿಕೆಯಾಗಿದೆ.

TRENDING