Tuesday, January 26, 2021
Home ರಾಜ್ಯ ರಾಜ್ಯದಲ್ಲಿ ಜ.10 ರವರೆಗೂ ಮಳೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಜ.10 ರವರೆಗೂ ಮಳೆ : ಹವಾಮಾನ ಇಲಾಖೆ

ಬೆಂಗಳೂರು: ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜನವರಿ 10ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದ್ರಂತೆ, ಬೆಂಗಳೂರಿನಲ್ಲಿ ಜನವರಿ 8 ರವರೆಗೆ ಅಂದ್ರೆ ಇನ್ನೆರಡು ದಿನ ವರ್ಷಧಾರೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್‌ ಪಾಟೀಲ್‌ ತಿಳಿಸಿದ್ದಾರೆ.

ಇನ್ನು ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣವಿದೆ. ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಜನವರಿ 8ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

TRENDING