Tuesday, January 26, 2021
Home ರಾಜ್ಯ ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ

ಇದೀಗ ಬಂದ ಸುದ್ದಿ

ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು, ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಇಂದು ಬೆಳಗ್ಗೆ 10 ಗಂಟೆಗೆ ನಗರದ ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಿದ್ದೇವೆ. ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಳೆಗಳಿಗೆ ಇಎಂಐ ಕಟ್ಟಲು ಒಂದು ವರ್ಷದ ಕಾಲಾವಕಾಶ ನೀಡಬೇಕು. ಪಠ್ಯಕ್ರಮ ಮತ್ತು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಬೇಕು. 1995 ರ ನಂತರ ಪ್ರಾರಂಭಿಸಿದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ.

TRENDING