Monday, January 18, 2021
Home ಅಂತರ್ ರಾಷ್ಟ್ರೀಯ ಅಮೆರಿಕ ಕ್ಯಾಪಿಟಲ್‌ಗೆ ನುಗ್ಗಿದ ಟ್ರಂಪ್ ಬೆಂಬಲಿಗರಿಂದ ಸಂಘರ್ಷ : ಓರ್ವ ವ್ಯಕ್ತಿಯ ಗುಂಡಿಕ್ಕಿ ಹತ್ಯೆ

ಇದೀಗ ಬಂದ ಸುದ್ದಿ

ಅಮೆರಿಕ ಕ್ಯಾಪಿಟಲ್‌ಗೆ ನುಗ್ಗಿದ ಟ್ರಂಪ್ ಬೆಂಬಲಿಗರಿಂದ ಸಂಘರ್ಷ : ಓರ್ವ ವ್ಯಕ್ತಿಯ ಗುಂಡಿಕ್ಕಿ ಹತ್ಯೆ

 ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷೀಯ ಚುನಾವಣೆಯ ವಿವಾದ ಮುಂದುವರೆದಿದ್ದು, ಅಧಿಕಾರ ತ್ಯಜಿಸಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಬುಧವಾರ ಪ್ರತಿಭಟನೆ ಆರಂಭಿಸಿದ್ದು, ಯುಎಸ್ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಗದ್ದಲ ಸೃಷ್ಟಿಸುವ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಲಾಗಿದೆ.. ಗುಂಡೇಟಿನಿಂದ ಮೃತಪಟ್ಟ ಸಂತ್ರಸ್ತೆಯನ್ನು ಕ್ಯಾಪಿಟಲ್‌ನಿಂದ ಸ್ಥಳಾಂತರಿಸಲಾಗಿದೆ. ಕೆಲವರು ಗಾಯಗೊಂಡಿದ್ದಾರೆ ಎಂದು ತುರ್ತು ಪರಿಸ್ಥಿತಿ ನಿರ್ವಹಣಾ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಭದ್ರತಾ ತಡೆಗಳನ್ನು ಭೇದಿಸಿ ಒಳನುಗ್ಗಿದ ಪ್ರತಿಭಟನಾಕಾರರು ಗದ್ದಲ ಸೃಷ್ಟಿಸಿದರು. ಚುನಾವಣೆಯಲ್ಲಿ ಟ್ರಂಪ್ ಅವರೇ ಗೆದ್ದಿದ್ದಾರೆ ಎಂದು ಕೂಗಿದರು.

TRENDING