ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏರೋ ಇಂಡಿಯಾ 2021 ರ ಕಾರ್ಯಕ್ರಮ ಫೆಬ್ರವರಿ 3 ರಿಂದ 5 ರವರೆಗೆ ನಿಗದಿ ಯಾಗಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್ ಇಂಡಿಯಾ ಶೋವನ್ನು ಕೊರೊನಾ ಕಾರಣಕ್ಕೆ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.
ಇಂತಹ ಲೋಹದ ಹಕ್ಕಿಗಳ ಹಾರಾಟಕ್ಕೂ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಲೋಹದ ಹಕ್ಕಿಗಳ ಹಾರಾಟ ಕಣ್ ತುಂಬಿಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಏರ್ ಶೋ ನೋಡಲು ಭಾರತ ಮಾತ್ರವಲ್ಲದೇ ವಿದೇಶದಿಂದ ಕೂಡ ಜನರು ಬರುತ್ತಾರೆ.
ಆದರೆ ಈ ಬಾರಿ ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್ ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರೀ ನಿರಾಸೆ ಉಂಟಾಗಿದೆ.