ಬೆಂಗಳೂರು : ರಾಜ್ಯಾದ್ಯಂತ ಜನವರಿ 17 ರಂದು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೊರೊನಾ ವೈರಸ್ ಕಾರಣ ಸಾಮಾಜಿಕ ಅಂತರ ಮಾಸ್ಕ್, ಸ್ಯಾನಿಟೈಸರ್ ಬಳಕೆ ಸೇರಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.