ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಲ್ಲರಿಗೂ ಸಚಿವ ಸ್ಥಾನ ಸಿಗಲಿದೆ. ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ.