Saturday, January 23, 2021
Home ರಾಜ್ಯ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ :ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ :ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬುಧವಾರ ಭಾರಿ ಮಳೆಯಾಗಿದೆ.

ಕೆಲವೆಡೆ ಇಡೀ ರಾತ್ರಿ ಮಳೆಯಾಗಿದ್ದು, ಇನ್ನು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಬುಧವಾರ ಮಳೆಯಾಗಿದ್ದು, ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗುರುವಾರದವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಜನವರಿ 10 ರ ವರೆಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ

TRENDING