‘ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ದೇಶದ ಎಲ್ಲರಿಗೂ ಲಸಿಕೆ ನೀಡಲು ಭಾರತ ಶಕ್ತವಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.
ನಿರ್ದಿಷ್ಟ ಫಲಾನುಭವಿಗಳನ್ನು ಆಯ್ಕೆ ಮಾಡುವ ಕಾರ್ಯಕ್ಕೆ ಕೇಂದ್ರ ಚಾಲನೆ ನೀಡಿದ್ದು, ಅವರಿಗೆ ವಿದ್ಯುನ್ಮಾನ ಪ್ರಮಾಣಪತ್ರ ನೀಡಲಿದೆ ಎಂದು ಹೇಳಿದರು.
ಇಲ್ಲಿನ ರಾಜೀವ್ಗಾಂಧಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ನೀಡುವ ತಾಲೀಮು ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
ಅಲ್ಪಾವಧಿಯಲ್ಲಿಯೇ ಕೋವಿಡ್ -19ಕ್ಕೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಶಕ್ತವಾಗಿದೆ. ಸದ್ಯ, ಎರಡು ಲಸಿಕೆಗಳಿಗೆ ತುರ್ತು ಬಳಕೆಗಾಗಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ನಾಲ್ಕು ಐದು ದಿನಗಳು ಅಥವಾ ಆದಷ್ಟು ಶೀಘ್ರದಲ್ಲಿ ನಾವು ಆದ್ಯತೆ ಗುಂಪುಗಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲಿದ್ದೇವೆ. ಈಗಾಗಲೇ ಪೂರಕ ಯೋಜನೆಗಳನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
135 ಕೋಟಿ ಜನಸಂಖ್ಯೆಯುಳ್ಳ ಭಾರತದಲ್ಲಿ ಸರ್ವರಿಗೂ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು