Saturday, January 23, 2021
Home ಕೋವಿಡ್-19 ಇಂದು ರಾಜ್ಯದ 263 ಸ್ಥಳಗಳಲ್ಲಿ ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್...

ಇದೀಗ ಬಂದ ಸುದ್ದಿ

ಇಂದು ರಾಜ್ಯದ 263 ಸ್ಥಳಗಳಲ್ಲಿ ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಇಂದು ಎಲ್ಲ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯಲಿದ್ದು, 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟು 263 ಸ್ಥಳಗಳನ್ನು ಗುರುತಿಸಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಶ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು, ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3201 ಐಎಲ್ ಆರ್, 3039 ಡೀಪ್ ಫ್ರೀಜರ್, 3312 ಕೋಲ್ಡ್ ಬಾಕ್ಸ್, 46591 ಲಸಿಕೆ ಕ್ಯಾರಿಯರ್, 225749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜು, 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದ್ದು, 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಒದಗಿಸಲಿದೆ ಎಂಬುದಾಗಿ ಹೇಳಿದ್ದಾರೆ.

ಕೊರೊನಾ ಲಸಿಕೆ ವಿತರಣೆಯಂತಹ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಲು ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ನಿರ್ಣಾಯಕವಾಗಿದ್ದು, ಇದನ್ನು ಜನಾಂದೋಲನದ ರೀತಿ ಪರಿಗಣಿಸಬೇಕಿದೆ. ಕೊರೊನಾ ಲಸಿಕೆಗೆ ಅನುಮತಿ ನೀಡಲು ಸರ್ಕಾರ ಎಲ್ಲಾ ವೈಜ್ಞಾನಿಕ ಪ್ರಕ್ರಿಯೆಗಳನ್ನು ಪಾಲಿಸಿದ್ದು, ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡಿದ್ದಾರೆ.

ದಿ ನ್ಯೂಸ್ ೨೪ ಕನ್ನಡ

TRENDING