ಬೆಂಗಳೂರು : ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಾರ್ಡ್ ಹೆಚ್ಚಳ ಕುರಿತಂತ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸೂಚಿಸಲಾಗಿತ್ತು. ಇಂತಹ ಕಡತವನ್ನು ರಾಜ್ಯಪಾಲರ ಅಂಕಿತಕ್ಕೂ ಕಳುಹಿಸಿಕೊಡಲಾಗಿತ್ತು. ಇದೀಗ ರಾಜ್ಯಪಾಲರು ಅಂಕಿತ ಸೂಚಿಸಿದ್ದು, ಇದರಿಂದಾಗಿ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾಗಲಿದೆ. ಈ ಮೂಲಕ ದೇಶದಲ್ಲೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೂ ಬಿಬಿಎಂಪಿ ಪಾತ್ರವಾಗಲಿದೆ.
ಹೈಕೋರ್ಟ್ ಸೂಚನೆಯಂತೆ ಸದ್ಯದಲ್ಲೇ ಬಿಬಿಎಂಪಿ ಚುನಾವಣೆ 198 ವಾರ್ಡ್ ಗಳಿಗೆ ಘೋಷಣೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ರಾಜ್ಯ ಸರ್ಕಾರ ಮಾತ್ರ ಕಳೆದ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಾರ್ಡ್ ಗಳನ್ನು 198ರಿಂದ 243ಕ್ಕೆ ಏರಿಕೆ ಮಾಡುವ ಮಸೂದೆಗೆ ಅಂಕಿತ ಸೂಚಿಸಿತ್ತು. ಇಂತಹ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.
ಇದೀಗ ರಾಜ್ಯಪಾಲ ವಜುಬಾಯಿ ವಾಲಾ ಅವರು ಬಿಬಿಎಂಪಿ ವಾರ್ಡ್ ಗಳ ಹೆಚ್ಚಳ ತಿದ್ದುಪಡಿ ಕಾಯ್ದೆಗೆ ಸಹಿ ಹಾಕಿದ್ದಾರೆ. ಇದರಿಂದಾಗಿ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾದಂತೆ ಆಗಿದೆ. ಅಲ್ಲದೇ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ಕೂಡ ಮುಂದೂಡಲ್ಪಡುವ ಸಾಧ್ಯತೆ ಇದೆ.