Wednesday, January 27, 2021
Home ಅಂತರ್ ರಾಷ್ಟ್ರೀಯ ಬ್ರಿಟನ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ : ದೆಹಲಿ ಸರ್ಕಾರ

ಇದೀಗ ಬಂದ ಸುದ್ದಿ

ಬ್ರಿಟನ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ : ದೆಹಲಿ ಸರ್ಕಾರ

ನವದೆಹಲಿ, ಜ. 08: ಭಾರತ ಮತ್ತು ಬ್ರಿಟನ್‌ ನಡುವಿನ ವಿಮಾನಗಳು ಇಂದು ಪುನರಾರಂಭಗೊಳ್ಳುತ್ತಿದ್ದಂತೆ ರಾಷ್ಟ್ರ ರಾಜಧಾನಿಗೆ ಆಗಮಿಸಲಿರುವ ಪ್ರಯಾಣಿಕರಿಗಾಗಿ ದೆಹಲಿ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬ್ರಿಟನ್‌ನಲ್ಲಿ ಹೊರಹೊಮ್ಮಿದ ಕೊರೊನಾವೈರಸ್‌ನ ರೂಪಾಂತರ ವೇಗವಾಗಿ ಹರಡುವ ಆತಂಕದ ಮಧ್ಯೆ ಬ್ರಿಟನ್‌ನಿಂದ ಏರ್ ಇಂಡಿಯಾ ವಿಮಾನವು 246 ಪ್ರಯಾಣಿಕರೊಂದಿಗೆ ದೆಹಲಿಗೆ ಬಂದಿಳಿದಿದೆ. ಹೀಗಾಗಿ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಹೊರಡಿಸಿದ ಆದೇಶದಲ್ಲಿ ಬ್ರಿಟನ್‌ನಿಂದ ಬರುವ ಎಲ್ಲ ಪ್ರಯಾಣಿಕರು ಕೊರೊನಾ ಪಾಸಿಟಿವ್ ಆದರೆ ಅವರನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ದೆಹಲಿ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಇದೇ ಸಮಯದಲ್ಲಿ ನೆಗೆಟಿವ್ ಇರುವ ಪ್ರಯಾಣಿಕರು ಏಳು ದಿನಗಳ ಕಾಲ ಕ್ವಾರಂಟೈನ್ ನಿರ್ಬಂಧವನ್ನು ಹೊಂದಿರುತ್ತಾರೆ. ಒಂದು ವಾರದ ನಂತರ, ಪ್ರಯಾಣಿಕರ ಆರೋಗ್ಯಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ಕೊರೊನಾವೈರಸ್ ಹೊಸ ರೂಪಾಂತರವು ಬ್ರಿಟನ್‌ನಲ್ಲಿ ಹೊರಹೊಮ್ಮಿದ್ದರಿಂದ ಭಾರತವು ಡಿಸೆಂಬರ್ 23 ರಿಂದ ಜನವರಿ 7ರವರೆಗೆ ಉಭಯ ದೇಶಗಳನ್ನು ಸಂಪರ್ಕಿಸುವ ಎಲ್ಲಾ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಿತ್ತು.

ಕೊರೊನಾವೈರಸ್‌ನ ಹೊಸ ರೂಪಾಂತರವಾದ SARS-CoV-2 ಸೋಂಕಿತ ಭಾರತೀಯರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಹೊಸ ರೂಪಾಂತರದಿಂದ ಸೋಂಕಿತ ಪ್ರಕರಣಗಳ ಸಂಖ್ಯೆ ಈಗ ಭಾರತದಲ್ಲಿ 82 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

TRENDING