Saturday, January 16, 2021
Home ರಾಜಕೀಯ ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ :ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿ

ಇದೀಗ ಬಂದ ಸುದ್ದಿ

ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ :ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿ

 ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬೆಳಗಾವಿ ಭಾಗದ ಮುಖಂಡರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು,ಬೆಳಗಾವಿ,ಬಸವ ಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಈ ಭಾಗದ ಮುಖಂಡರ ಸಭೆ ಕರೆದು, ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿರುವುದಾಗಿ ಹೇಳಿದರು.

ತಾನು ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

TRENDING