Sunday, January 24, 2021
Home ಅಂತರ್ ರಾಜ್ಯ ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೊರೊನಾ ಲಸಿಕೆ : ಮಮತಾ ಬ್ಯಾನರ್ಜಿ

ಇದೀಗ ಬಂದ ಸುದ್ದಿ

ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೊರೊನಾ ಲಸಿಕೆ : ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ.

ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ರಾಜ್ಯದಲ್ಲಿನ ಎಲ್ಲಾ ಜನರಿಗೆ ಕೋವಿಡ್- 19 ಲಸಿಕೆ ನೀಡಲು ರಾಜ್ಯ ಸರ್ಕಾರ ಎಲ್ಲಾ ಸಿದ್ದತೆ ಮಾಡುತ್ತಿರುವುದನ್ನು ಸಂತೋಷದಿಂದ ತಿಳಿಸುತ್ತಿರುವುದಾಗಿ ಬ್ಯಾನರ್ಜಿ ನುಡಿದಿದ್ದಾರೆ.

ಕೇರಳ, ತಮಿಳುನಾಡು, ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು, ತಮ್ಮ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ನೀಡುವುದಾಗಿ ತಿಳಿಸಿವೆ. ಜನವರಿ 16 ರಿಂದ ದೇಶದಲ್ಲಿ ಕೋವಿಡ್-19 ಲಸಿಕೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮೊದಲ ಹಂತದಲ್ಲಿ ಮೂರು ಕೋಟಿ ಮುಂಚೂಣಿ ಕಾರ್ಯಕರ್ತರಿಗೆ, ನಂತರ 50 ವರ್ಷಕ್ಕೂ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ. ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದಲ್ಲಿ ಇದು ಮಹತ್ವದ ಮೈಲುಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

TRENDING